ಮುಂಬೈ : ಮಹಾರಾಷ್ಟ್ರದ ಯಾವತ್ಮಾಲ್-ವಶೀಂ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಮಾಡುತ್ತಿದ್ದಾಗ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್‌ ಗಡ್ಕರಿ ಕುಸಿದು ಬಿದ್ದಿದ್ದಾರೆ. ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ನಿತಿನ್‌ ಗಡ್ಕರಿ ವೇದಿಕೆ ಮೇಲೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಯಾವುದೇ ಅಪಾಯವಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ನಿತಿನ್‌ ಗಡ್ಕರಿ ಯಾವತ್ಮಾಲ್‌-ವಶೀಂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರ ಶಿವಸೇನೆ ಅಭ್ಯರ್ಥಿ ರಾಜಶ್ರೀ ಪಾಟೀಲ ಅವರ ಪರವಾಗಿ ಪ್ರಚಾರ ಮಾಡಲು ಹೋಗಿದ್ದರು. ಅವರು ವೇದಿಕೆ ಮೇಲೆ ಇದ್ದಾಗಲೇ ಕುಸಿದಿದ್ದಾರೆ. ಅತಿಯಾದ ಬಿಸಿಲು, ಅಬ್ಬರದ ಪ್ರಚಾರದಿಂದಾಗಿ ಸುಸ್ತಾಗಿದ್ದ ಅವರು ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.