ಹೊಸದಿಲ್ಲಿ: ಮಂಗಳೂರು- ಶಿವಮೊಗ್ಗ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ 2024-25ರ ವಾರ್ಷಿಕ ಯೋಜನೆಯಲ್ಲಿ ದ್ವಿಪಥ ರಸ್ತೆ ಮಾಡುವುದು ಪ್ಲಾನ್‌ನಲ್ಲಿ ಸೇರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಸಂಸತ್ತಿನಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಶಿವಮೊಗ್ಗ-ಮಂಗಳೂರು ಮಾರ್ಗದ ಎನ್‌ಎಚ್-169 ರ ಮಾಳ ಗೇಟ್‌ನಿಂದ ಕಾರ್ಕಳ ಮಾರ್ಗದ ಚತುಷ್ಪಥ ಕಾಮಗಾರಿ ಮುಂದಿನ ವರ್ಷ ಫೆಬ್ರವರಿ ವೇಳೆಗೆ ಪೂರ್ಣಗೊಳ್ಳಲಿದೆ. ಇದೇ ವೇಳೆ ಆಗುಂಬೆ ಘಾಟಿಯಲ್ಲಿ ಎನ್‌ಎಚ್ 169ಎ ದ್ವಿಪಥದ ಕಾಮಗಾರಿಯನ್ನು 2024-25ರ ವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.