ಬೆಂಗಳೂರು :
ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ ರೂ. 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ ರೂ. 350 ಕೋಟಿ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ ನೆಪ್ರೋ ಯೂರಾಲಜಿ ಆಸ್ಪತ್ರೆ, 100 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಮುಂದಾಗಿರುವುದು ಉತ್ತಮ ನಿರ್ಧಾರ ಎಂದು ಪಾಟೀಲ್ ಹೇಳಿದ್ದಾರೆ.

ಕಲಬುರಗಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಬೆಂಗಳೂರು ಇವರ ತಾಂತ್ರಿಕ ನೆರವಿನೊಂದಿಗೆ ಸ್ಥಾಪನೆ.

ಗದಗ, ಕೊಪ್ಪಳ ಹಾಗೂ ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರಿನ ನೆಪ್ರೊ ಯೂರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೊಟಿಕ್ ಯಂತ್ರದ ಮೂಲಕ ಉತ್ತಮ ಚಿಕಿತ್ಸೆ ನೀಡಲು ಕ್ರಮ.

ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 ಮಾಡೂಲರ್ ಓಟಿಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಮುಂದಾಗಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.

ಗದಗ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾಥ್ಲಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸಂಸ್ಥೆಗಳಲ್ಲಿ 64 ಅನೇಸ್ತೇಷಿಯಾ ವರ್ಕ್ ಸ್ಟೇಷನ್‍ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ, ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಹ್ಯೂಮನ್ ಮಿಲ್ಕ್ ಬ್ಯಾಂಕ್‍ಗಳನ್ನು ಇನ್ನು ಮುಂದೆ ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡಲು ಹೊರಟಿರುವುದು ಉತ್ತಮ ಬೆಳವಣಿಗೆ ಎಂದು ಪಾಟೀಲ್‌ ಹೇಳಿದ್ದಾರೆ.

ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ, ಸೋಂಕುಗಳನ್ನು ಪತ್ತೆ ಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್ ಆಸ್ಪತ್ರೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರ ಬಜೆಟ್ ನಲ್ಲಿರುವ ಪ್ರಮುಖ ಅಂಶ :

ನಗರಾಭಿವೃದ್ಧಿ
250. ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್‌ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ.
251. ಬಿ.ಬಿ.ಎಂ.ಪಿ ಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೊಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ;
• 2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ ದಾಖಲೆಯ ತೆರಿಗೆ ಸಂಗ್ರಹ ಮಾಡುವತ್ತ ಮುನ್ನಡೆದಿದೆ. ಇದು 2022-23ನೇ ಸಾಲಿಗಿಂತ 1,000 ಕೋಟಿ ರೂ. ಗಳಷ್ಟು ಹೆಚ್ಚಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ನಿರೀಕ್ಷೆ ಇದೆ.
• ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Premium FAR ನೀತಿಯನ್ನು ಜಾರಿಗೆ ತರುವ ಮೂಲಕ ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ.
• ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25ನೇ ಸಾಲಿನಿಂದ ಮಾಲೀಕರಿಗೆ ಡಿಜಿಟಲ್‌ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಲಾಗುವುದು.
252. ಮೇಲೆ ವಿವರಿಸಿರುವಂತೆ ಸಂಗ್ರಹವಾಗುವ ಹೆಚ್ಚುವರಿ ಸಂಪನ್ಮೂಲಗಳಿಂದ ಆದ್ಯತೆಯ ಮೇಲೆ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಯನ್ನು ನಿವಾರಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ;
• ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್‌ ಟಾಪಿಂಗ್‌ ಕಾಮಗಾರಿಗಳನ್ನು 1,700 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಲಾಗಿದೆ. ಈ ಕಾಮಗಾರಿಗಳನ್ನು ಡಿಸೆಂಬರ್‌ 2025 ರೊಳಗೆ ಪೂರ್ಣಗೊಳಿಸಲಾಗುವುದು.
• ಭೂಮಿಯ ಅಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕಾರಣ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆಯು ಅತ್ಯಂತ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಿದೆ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್‌ ನಲ್ಲಿ ಪ್ರಾಯೋಗಿಕವಾಗಿ ಟನೆಲ್‌ ಅನ್ನು ನಿರ್ಮಿಸಲಾಗುವುದು.
• ನಾಲಾ ಬಫರ್‌ ವಲಯದೊಳಗೆ ನಾಲಾ ಬಫರ್‌ ಅನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ
ಹೊಸ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಯಡಿ ಈಗಾಗಲೇ 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.
• ಸುಗಮ ಸಂಚಾರ-ಬ್ರಾಂಡ್‌ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಂಸ್ಥೆಯು ನೀಡುವ ವರದಿಯನ್ನು ಆಧರಿಸಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು.
253. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜೊತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್‌ ರಿಂಗ್‌ ರೋಡ್‌ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲು ಉದ್ದೇಶಿಸಲಾಗಿದೆ.
ಈ ಯೋಜನೆಯಡಿ 73 ಕಿ.ಮೀ. ಉದ್ದದ ರಸ್ತೆಯನ್ನು 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು RFP ಕರೆಯಲಾಗಿದೆ. ಈ ಯೋಜನೆಯನ್ನು ಇದೇ ಸಾಲಿನಲ್ಲಿ ಪ್ರಾರಂಭ ಮಾಡಲು ಉದ್ದೇಶಿಸಿದೆ.
254. ಬೆಂಗಳೂರು ನಗರದಲ್ಲಿ 250 ಮೀಟರ್‌ ಎತ್ತರದ ಸ್ಕೈ-ಡೆಕ್‌
(Sky-Deck) ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ವಾಸ್ತುವಿನ್ಯಾಸಗಾರರನ್ನು ಆಹ್ವಾನಿಸಿದೆ. ಇದರಿಂದ ನಗರದ ಒಳಗೆ ಆಕರ್ಷಕವಾದ ಪ್ರವಾಸಿ ತಾಣವನ್ನು ಸೃಜಿಸಿದಂತಾಗುತ್ತದೆ.
255. ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಾದ BBMP, BMRCL, BWSSB, BDA ಗಳ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್‌ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್‌ ಪಾರ್ಕ್‌ ಅನ್ನು Captive/Group Captive ಮೂಲಕ ಸ್ಥಾಪಿಸಲಾಗುವುದು.
256. ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್‌-ಅರ್ಬನ್‌ ರೈಲು ಯೋಜನೆಗಳು ಜನರ ಸುಗಮ ಸಂಚಾರದ ದೃಷ್ಟಿಯಿಂದ ಕ್ರಾಂತಿಕಾರಿ ಬದಲಾವಣೆ ತರಲಿವೆ.
ಈ ಬಹುವಿಧ ಸಾರಿಗೆ ವ್ಯವಸ್ಥೆಗಳನ್ನು ಒಗ್ಗೂಡಿಸಿ, ಪರಸ್ಪರ ಸಮನ್ವಯದಿಂದ ಕಾರ್ಯಾಚರಣೆ ಮಾಡುವ ಮೂಲಕ ಜನರು ಹೆಚ್ಚು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸಲು ಪ್ರೇರೇಪಿಸುವುದು ನಮ್ಮ ಆದ್ಯತೆಯಾಗಿದೆ. ಇದರಿಂದ ಸಂಚಾರ ದಟ್ಟಣೆ ಹಾಗೂ ಪರಿಸರ ಮಾಲಿನ್ಯಗಳ ನಿಯಂತ್ರಣ ಸಾಧ್ಯವಾಗುವುದಲ್ಲದೆ, ಬದುಕು ಇನ್ನಷ್ಟು ಸುಗಮವಾಗಲಿದೆ.
257. ದೇಶದ ಅತ್ಯುತ್ತಮ ಮೆಟ್ರೋ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ನಮ್ಮ ಮೆಟ್ರೋ ರೈಲು ಯೋಜನೆಯು ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿದೆ. 8 ಲಕ್ಷಕ್ಕೂ ಹೆಚ್ಚಿನ ಜನರು
ಪ್ರತಿನಿತ್ಯ ಮೆಟ್ರೋ ಸೇವೆಯನ್ನು ಬಳಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯಲ್ಲಿರುವ 74 ಕಿ.ಮೀ. ಮಾರ್ಗದೊಂದಿಗೆ 2025ರ ಮಾರ್ಚ್‌ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ.
258. ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್‌ ವೇಳೆಗೆ ಪೂರ್ಣಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಪ್ರಥಮ ಬಾರಿ ಕಾರ್ಯಾಚರಣೆಯು ಲಾಭದಾಯಕವಾಗಿ (Operational Profit) ಪರಿಣಮಿಸಿರುವುದು ಹೆಮ್ಮೆಯ ಸಂಕೇತವಾಗಿದೆ.
259. ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆಯಲ್ಲಿದೆ.
260. ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಕುರಿತು ಡಿ.ಪಿ.ಆರ್. ಕರಡು ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು.
261. ಮಂದಗತಿಯಲ್ಲಿ ಸಾಗುತ್ತಿದ್ದ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಚುರುಕುಗೊಳಿಸಿ, ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್‌-2ರ ಸಿವಿಲ್‌ ಕಾಮಗಾರಿಗಳನ್ನು ವೇಗವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕಾರಿಡಾರ್‌-4 ರ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. Rolling Stock ಮತ್ತು ಅದರ ಕಾರ್ಯಾಚರಣೆ ಮತ್ತು ನಿರ್ವಹಣೆಗೆ RFP ಆಹ್ವಾನ ಮಾಡಲಾಗಿದೆ. European Investment Bank ಮತ್ತು ಜರ್ಮನಿಯ KFW ಬ್ಯಾಂಕುಗಳ ಜೊತೆಗೆ ಆರ್ಥಿಕ ನೆರವಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಲಾಗುವುದು ಮತ್ತು ಕೇಂದ್ರ ಸರ್ಕಾರ ನೀಡುವ ಅನುದಾನಕ್ಕೆ ಎದುರಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನವನ್ನು ಒದಗಿಸಲಾಗುವುದು.
262. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರತಿದಿನ ಸರಾಸರಿ
42 ಲಕ್ಷ ಜನರಿಗೆ ಸೇವೆಯನ್ನು ಒದಗಿಸುತ್ತಿದ್ದು, ದೇಶದಲ್ಲಿಯೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್‌ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್‌ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆಗೊಳಿಸಲಾಗುವುದು.
263. ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಹಿಳಾ ಸುರಕ್ಷತೆಯನ್ನು ಒಳಗೊಂಡ
Vehicle Tracking ಹೊಂದಿರುವ ಮೊಬೈಲ್‌ ಆಪ್‌ ಅನ್ನು ಅನುಷ್ಠಾನಗೊಳಿಸಲಾಗುತ್ತಿದೆ.
264. ಜಪಾನ್‌ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Area Traffic Signal Control System ಅನ್ನು ನಗರದ ಪ್ರಮುಖ
28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್‌ ಸಿಗ್ನಲ್‌ ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸಲಾಗುವುದು.
265. ನಗರದ ಅಭಿವೃದ್ಧಿಯ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳ ಜೊತೆಯಲ್ಲಿ ನಾಗರಿಕರ ಬದುಕಿನ ಗುಣಮಟ್ಟ ಸುಧಾರಣೆಗೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದ್ದು, ಉತ್ತಮ ಪರಿಸರ, 24×7 ಕುಡಿಯುವ ನೀರಿನ ಪೂರೈಕೆ ಮತ್ತು ಸ್ವಚ್ಛತೆಯ ನಿರ್ವಹಣೆಗೆ ಒತ್ತು ನೀಡಲಾಗುವುದು.
ಈ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;
• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ 775 ಎಂ.ಎಲ್.ಡಿ ಸಾಮರ್ಥ್ಯದ ಕಾವೇರಿ ಹಂತ-5 ಯೋಜನೆಯನ್ನು ಮೇ 2024 ರಲ್ಲಿ ಕಾರ್ಯಾರಂಭಗೊಳಿಸುವ ಮೂಲಕ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್‌ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು.
• ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್‌ 2024 ರಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ
228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆಯನ್ನು ಅಳವಡಿಸಲಾಗುವುದು ಮತ್ತು 13 ಎಸ್.ಟಿ.ಪಿ ಘಟಕಗಳಿಂದ
100 ಎಂ.ಎಲ್.ಡಿ ರಷ್ಟು ಒಳಚರಂಡಿ ನೀರನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಸೃಜಿಸಲಾಗುವುದು.
• 07 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್.ಟಿ.ಪಿ)
441 ಕೋಟಿ ರೂ.ಗಳ ಮೊತ್ತದಲ್ಲಿ ಉನ್ನತೀಕರಿಸಲಾಗುವುದು. ಇದರಿಂದ 268 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಪ್ರತಿನಿತ್ಯ ಸಂಸ್ಕರಿಸಿ ಮರುಬಳಕೆ ಮಾಡಲು ಅನುಕೂಲವಾಗಲಿದೆ.
• ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು 200 ಕೋಟಿ ರೂ.ಗಳ ಮೊತ್ತದಲ್ಲಿ ಪ್ರಾರಂಭಿಸಲಾಗುವುದು.
266. ಮನೆಗಳಿಂದ ತ್ಯಾಜ್ಯ ಸಂಸ್ಕರಣಾ ಘಟಕಗಳವರೆಗೂ ತ್ಯಾಜ್ಯಗಳ ವಿಲೇವಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಬೆಂಗಳೂರು ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು. ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ
50 ರಿಂದ 100 ಎಕರೆ ಜಮೀನನ್ನು ಗುರುತಿಸಿ ಮುಂದಿನ
30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಲಾಗುವುದು.
267. ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ ಮಾಡಿ, ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದೆ. ನಗರದಲ್ಲಿ ವಾತಾವರಣದ ಸ್ವಚ್ಛತೆಗಾಗಿ ಮರಗಳ ಗಣತಿ, ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ ಹಾಗೂ ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನು ಹೆಚ್ಚಿಸಲು ಪ್ರತ್ಯೇಕ ನೀತಿ ಜಾರಿಗೊಳಿಸಲಾಗುವುದು.
268. ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗುವುದು.
269. ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಠಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ
(1:೦೦ am) ವಿಸ್ತರಿಸಲಾಗುವುದು.
ಪೌರಾಡಳಿತ
270. ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಸುಸ್ಥಿರವಾದ ಮೂಲಸೌಕರ್ಯಗಳನ್ನು ಒಳಗೊಂಡ ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವಂತೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಲಿದೆ;
• ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ
10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.
• ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್‌, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.
• ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿಪಡಿಸಲಾಗುವುದು.
• ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ • ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
271. ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್‌ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆಯನ್ನು ಪಿಪಿಪಿ ಅಥವಾ ಟೌನ್‌ ಪ್ಲಾನಿಂಗ್‌ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
272. ನಗರ ಪ್ರದೇಶದ ಎಲ್ಲಾ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಮೃತ್ 2.0 ಕೇಂದ್ರ ಪುರಸ್ಕೃತ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ಪಾಲು
4,615 ಕೋಟಿ ರೂ. ಗಳಾಗಿದೆ. ಕಳೆದ ವರ್ಷ ಈ ಉದ್ದೇಶಕ್ಕಾಗಿ ನಾವು 320 ಕೋಟಿ ರೂ. ಅನುದಾನ ಒದಗಿಸಿದ್ದು, ಈ ವರ್ಷ
200 ಕೋಟಿ ರೂ. ಒದಗಿಸಿ, 7.5 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರನ್ನು ಒದಗಿಸುವ ಗುರಿ ಹೊಂದಿದ್ದೇವೆ.
273. ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ಕೇಂದ್ರ ಸರ್ಕಾರದ ಪಾಲು
2,185 ಕೋಟಿ ರೂ.ಗಳನ್ನು ಒಳಗೊಂಡಂತೆ 5,072 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ನಮ್ಮ ಜಲ ಮೂಲಗಳನ್ನು ಮಲಿನಗೊಳಿಸುವ ದ್ರವ ತ್ಯಾಜ್ಯಗಳ ಸಂಸ್ಕರಣೆ, ಲೆಗೆಸಿ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡುವ ಮೂಲಕ ನಗರಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಾಣ ಮಾಡಲು ಒತ್ತು ನೀಡಲಾಗುವುದು.
274. ಸ್ಥಳೀಯ ಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಸಹಭಾಗಿತ್ವದ ಯೋಜನೆಯಾದ ಅಮೃತ್‌ 2.0 ಅಡಿಯಲ್ಲಿ,
539 ಕೋಟಿ ರೂ. ಮೊತ್ತದಲ್ಲಿ ಕೆರೆ ಹಾಗೂ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳನ್ನು ಆಯ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಾಗುವುದು.
275. ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು.
276. ಆಸ್ತಿ ತೆರಿಗೆ ಮತ್ತು ಇನ್ನಿತರೆ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟಲು
3ಡಿ ಡ್ರೋನ್‌ ತಂತ್ರಜ್ಞಾನವನ್ನು ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್‌ ಮತ್ತು ಮರು ಮೌಲ್ಯಮಾಪನವನ್ನು ಕೈಗೊಳ್ಳಲಾಗುವುದು.
277. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲು ಮಾಡಲು, ಸ್ಥಳೀಯ ಮಹಿಳಾ
ಸ್ವ-ಸಹಾಯ ಗುಂಪುಗಳ ಸೇವೆಯನ್ನು ಪಡೆಯಲಾಗುವುದು.
278. ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ನೇರಪಾವತಿಯಡಿಯಲ್ಲಿ ಬಾಕಿ ಉಳಿದಿರುವ ಪೌರಕಾರ್ಮಿಕರಿಗೂ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮವಹಿಸಲಾಗುವುದು.
279. ಸಮರ್ಪಕ ಹಾಗೂ ಯೋಜಿತ ನಗರೀಕರಣಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲಾ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸಲು ಕ್ರಮಕೈಗೊಳ್ಳಲಾಗುವುದು.
280. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡಲಾಗುವುದು.
281. ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್‌ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.

ಪೌರಾಡಳಿತ
270. ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಸುಸ್ಥಿರವಾದ ಮೂಲಸೌಕರ್ಯಗಳನ್ನು ಒಳಗೊಂಡ ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವಂತೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಲಿದೆ;
• ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ
10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.
• ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್‌, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.
• ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿಪಡಿಸಲಾಗುವುದು.
• ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ • ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
271. ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್‌ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆಯನ್ನು ಪಿಪಿಪಿ ಅಥವಾ ಟೌನ್‌ ಪ್ಲಾನಿಂಗ್‌ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
272. ನಗರ ಪ್ರದೇಶದ ಎಲ್ಲಾ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಮೃತ್ 2.0 ಕೇಂದ್ರ ಪುರಸ್ಕೃತ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ಪಾಲು
4,615 ಕೋಟಿ ರೂ. ಗಳಾಗಿದೆ. ಕಳೆದ ವರ್ಷ ಈ ಉದ್ದೇಶಕ್ಕಾಗಿ ನಾವು 320 ಕೋಟಿ ರೂ. ಅನುದಾನ ಒದಗಿಸಿದ್ದು, ಈ ವರ್ಷ
200 ಕೋಟಿ ರೂ. ಒದಗಿಸಿ, 7.5 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರನ್ನು ಒದಗಿಸುವ ಗುರಿ ಹೊಂದಿದ್ದೇವೆ.
273. ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ಕೇಂದ್ರ ಸರ್ಕಾರದ ಪಾಲು
2,185 ಕೋಟಿ ರೂ.ಗಳನ್ನು ಒಳಗೊಂಡಂತೆ 5,072 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ನಮ್ಮ ಜಲ ಮೂಲಗಳನ್ನು ಮಲಿನಗೊಳಿಸುವ ದ್ರವ ತ್ಯಾಜ್ಯಗಳ ಸಂಸ್ಕರಣೆ, ಲೆಗೆಸಿ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡುವ ಮೂಲಕ ನಗರಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಾಣ ಮಾಡಲು ಒತ್ತು ನೀಡಲಾಗುವುದು.
274. ಸ್ಥಳೀಯ ಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಸಹಭಾಗಿತ್ವದ ಯೋಜನೆಯಾದ ಅಮೃತ್‌ 2.0 ಅಡಿಯಲ್ಲಿ,
539 ಕೋಟಿ ರೂ. ಮೊತ್ತದಲ್ಲಿ ಕೆರೆ ಹಾಗೂ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳನ್ನು ಆಯ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಾಗುವುದು.
275. ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು.
276. ಆಸ್ತಿ ತೆರಿಗೆ ಮತ್ತು ಇನ್ನಿತರೆ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟಲು
3ಡಿ ಡ್ರೋನ್‌ ತಂತ್ರಜ್ಞಾನವನ್ನು ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್‌ ಮತ್ತು ಮರು ಮೌಲ್ಯಮಾಪನವನ್ನು ಕೈಗೊಳ್ಳಲಾಗುವುದು.
277. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲು ಮಾಡಲು, ಸ್ಥಳೀಯ ಮಹಿಳಾ
ಸ್ವ-ಸಹಾಯ ಗುಂಪುಗಳ ಸೇವೆಯನ್ನು ಪಡೆಯಲಾಗುವುದು.
278. ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ನೇರಪಾವತಿಯಡಿಯಲ್ಲಿ ಬಾಕಿ ಉಳಿದಿರುವ ಪೌರಕಾರ್ಮಿಕರಿಗೂ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮವಹಿಸಲಾಗುವುದು.
279. ಸಮರ್ಪಕ ಹಾಗೂ ಯೋಜಿತ ನಗರೀಕರಣಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲಾ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸಲು ಕ್ರಮಕೈಗೊಳ್ಳಲಾಗುವುದು.
280. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡಲಾಗುವುದು.
281. ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್‌ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.
ಇಂಧನ
282. ಗೃಹ ವಿದ್ಯುತ್‌ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತ
ವಿದ್ಯುತ್‌ ನೀಡುವ ಗೃಹಜ್ಯೋತಿ ಗ್ಯಾರಂಟಿ ಯೋಜನೆಯನ್ನು
ಜುಲೈ 1 ರಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ.
ಈ ಯೋಜನೆಯಡಿ 1.65 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಅಂದಾಜು 5 ಕೋಟಿಯಷ್ಟು ಜನರು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿದ್ದಾರೆ.
283. ಇದರೊಂದಿಗೆ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಮೊದಲಾದ ಯೋಜನೆಗಳ ಫಲಾನುಭವಿಗಳನ್ನೂ ಸಹ ಗೃಹಜ್ಯೋತಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಗಿದೆ. ಅಲ್ಲದೆ,
48 ಯುನಿಟ್‌ ಒಳಗಿನ ಸರಾಸರಿ ಬಳಕೆಗೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್‌ ಬದಲಿಗೆ 10 ಯುನಿಟ್‌ಗಳಷ್ಟು ಹೆಚ್ಚುವರಿ ವಿದ್ಯುತ್‌ ಒದಗಿಸಲು ತೀರ್ಮಾನಿಸಲಾಗಿದೆ.
284. ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯದಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಮುಂದಿನ 7 ವರ್ಷಗಳಲ್ಲಿ ಇಂಧನ ವಲಯಕ್ಕೆ ಹೆಚ್ಚಿನ ಬಂಡವಾಳವನ್ನು ಆಕರ್ಷಿಸುವ ಮೂಲಕ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯವನ್ನು‌ 32,000 ಮೆಗಾವ್ಯಾಟ್‌ ನಿಂದ 60,000 ಮೆಗಾವ್ಯಾಟ್ ಗಳಿಗೆ ಹೆಚ್ಚಿಸಲಾಗುವುದು.
285. ರಾಜ್ಯವು ಉತ್ಪಾದಿಸುತ್ತಿರುವ ವಿದ್ಯುತ್ತಿನ ಶೇ.63 ರಷ್ಟು ಇಂಧನವು ನವೀಕರಿಸಬಹುದಾದ ಇಂಧನದಿಂದ ಆಗಿರುತ್ತದೆ. ನಮ್ಮ ಸರ್ಕಾರದ ಸಕಾರಾತ್ಮಕ ನೀತಿಗಳಿಂದ ಈ ವಲಯದಲ್ಲಿ ಸಾವಿರಾರು ಕೋಟಿ ರೂ. ಖಾಸಗಿ ಹೂಡಿಕೆಯನ್ನು ಮಾಡಲಾಗುತ್ತಿದೆ. ಈ ನೀತಿಗಳನ್ನು ಇನ್ನಷ್ಟು ಹೂಡಿಕೆದಾರರ ಸ್ನೇಹಿಯನ್ನಾಗಿ ಮಾಡಲು ಕ್ರಮವಹಿಸಲಾಗುವುದು.
286. ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು PM-KUSUM Component-B ಯೋಜನೆಯಡಿ 1,174 ಕೋಟಿ ರೂ. ಅಂದಾಜು ವೆಚ್ಚದಲ್ಲಿ 40,000 ಜಾಲ ಮುಕ್ತ (Off Grid) ಸೋಲಾರ್ ಪಂಪ್ ಸೆಟ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30ರಷ್ಟಿದ್ದು, ರಾಜ್ಯ ಸರ್ಕಾರದ ವತಿಯಿಂದ ನೀಡುವ ಸಹಾಯಧನವನ್ನು ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಲಾಗಿದೆ.
287. ಕರ್ನಾಟಕ ವಿದ್ಯುತ್‌ ನಿಗಮವು Tehri Hydro Development Corporation India Limited (THDCIL) ಸಹಯೋಗದೊಂದಿಗೆ ತೇಲುವ (Floating) ಸೌರ ಹಾಗೂ ಭೂಸ್ಥಾಪಿತ (Ground mounted) ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.
288. ಕೃಷಿ ಪಂಪ್‌ಸೆಟ್‌ ಫೀಡರ್‌ ಸೌರೀಕರಣ ಯೋಜನೆ ಹಂತ-I ಅಡಿಯಲ್ಲಿ 1,320 ಮೆಗಾ ವ್ಯಾಟ್‌ ವಿಕೇಂದ್ರೀಕೃತ ಉತ್ಪಾದನೆಗೆ ಕ್ರಮವಹಿಸಲಾಗಿದೆ. ಇದರಿಂದ 3.37 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಇದಲ್ಲದೆ, ಹಂತ-II ಅಡಿಯಲ್ಲಿ 1,192 ಮೆಗಾ ವ್ಯಾಟ್‌ ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ
4.30 ಲಕ್ಷ ಐ.ಪಿ. ಸೆಟ್‌ಗಳನ್ನು ಸೌರೀಕರಣಗೊಳಿಸಲು ಉದ್ದೇಶಿಸಲಾಗಿದೆ.
289. ಗ್ರೀನ್‌ ಹೈಡ್ರೋಜನ್‌ ಭವಿಷ್ಯದ ಇಂಧನ. ಖಾಸಗಿ ಬಂಡವಾಳವನ್ನು ಈ ವಲಯಕ್ಕೆ ಆಕರ್ಷಿಸಲು 300 ಕಿಲೋ ವ್ಯಾಟ್‌ ಸಾಮರ್ಥ್ಯದ
ಗ್ರೀನ್ ಹೈಡ್ರೋಜನ್ ಸ್ಥಾವರವನ್ನು ಪ್ರಾಯೋಗಿಕವಾಗಿ ಅಂದಾಜು
10 ಕೋಟಿ ರೂ. ವೆಚ್ಚದಲ್ಲಿ MNRE ನಿಧಿಯಿಂದ ಸ್ವಯಂ-ಸುಸ್ಥಿರ ಘಟಕದ ಆಧಾರದ ಮೇಲೆ KREDL ವತಿಯಿಂದ ಅನುಷ್ಠಾನಗೊಳಿಸಲಾಗುವುದು ಮತ್ತು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸಲಾಗುವುದು.
290. KREDL ನಿಂದ ಪ್ರತೀ ಎಸ್ಕಾಂ ವ್ಯಾಪ್ತಿಯ ಆಯ್ದ ಒಂದು ಹಿಂದುಳಿದ ಗ್ರಾಮದಲ್ಲಿ ಪ್ರಾಯೋಗಿಕವಾಗಿ ಮೈಕ್ರೋಗ್ರಿಡ್ ವ್ಯವಸ್ಥೆಯ (Microgrid) ಮೂಲಕ ಬ್ಯಾಟರಿ ಶೇಖರಣೆಯನ್ನು ಹೊಂದಿದ 500 ಕಿಲೋ ವ್ಯಾಟ್‌ ಸಾಮರ್ಥ್ಯದ ಸೌರ ಘಟಕದ ಸ್ಥಾಪನೆಯ ಮೂಲಕ ಸದರಿ ಗ್ರಾಮಗಳನ್ನು ಸ್ವಾವಲಂಬಿ ಗ್ರಾಮಗಳನ್ನಾಗಿ ಮಾಡಲು ಉದ್ದೇಶಿಸಿದೆ.
291. ನವೀಕರಿಸಬಹುದಾದ ಇಂಧನವನ್ನು ಬೃಹತ್‌ ಪ್ರಮಾಣದಲ್ಲಿ ಉತ್ಪಾದಿಸಿ ಬೇಡಿಕೆ ಹೆಚ್ಚಿರುವ ಕೇಂದ್ರಗಳು ಮತ್ತು ಗ್ರೀನ್ ಹೈಡ್ರೋಜನ್ ಹಬ್‌ಗಳಿಗೆ ರವಾನಿಸಲು 765 kV ಯ Ultra High
Voltage (UHV) ಟ್ರಾನ್ಸ್‌ಮಿಷನ್ ಮಾರ್ಗಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುವುದು.
292. ಪ್ರಸರಣ ಮಾರ್ಗಗಳ ನಿರ್ವಹಣೆಯಲ್ಲಿ ನಿಗದಿತ ಸ್ಥಗಿತಗಳು ಹಾಗೂ ದೀರ್ಘಾವಧಿಯ ಸ್ಥಗಿತಗಳನ್ನು ತಪ್ಪಿಸಲು 66 kV ಮತ್ತು
110 kV ಮೊಬೈಲ್/ ವಾಹನ ಮೇಲಿರಿಸಿರುವ ಸಬ್‌ಸ್ಟೇಷನ್‌ಗಳನ್ನು ಖರೀದಿಸಲಾಗುವುದು.
293. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಹುಮಹಡಿ ಕಟ್ಟಡಗಳ ಬೆಳವಣಿಗೆಯಿಂದಾಗಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಯನ್ನು ನೀಗಿಸಲು, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಬ್‌ಸ್ಟೇಷನ್‌ಗಳನ್ನು ಉನ್ನತೀಕರಿಸಲಾಗುವುದು.
294. ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಲು
2,500 EV Charging ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಅಲ್ಲದೇ, ವಿದ್ಯುತ್‌ ಸರಬರಾಜು ಕಂಪನಿಗಳ ಮೂಲಕ 35 ಕೋಟಿ ರೂ. ವೆಚ್ಚದಲ್ಲಿ 100 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

*ಲೋಕೋಪಯೋಗಿ*

295. ಪ್ರಸಕ್ತ ಸಾಲಿನಲ್ಲಿ ಕೆಶಿಪ್-4 ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 875 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಯನ್ನು ಬಾಹ್ಯ ಹಣಕಾಸು ಸಂಸ್ಥೆಯ ನೆರವಿನೊಂದಿಗೆ 5,736 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುವುದು.

296. ರಾಜ್ಯದಲ್ಲಿನ 1,300 ಕಿ.ಮೀ. ಉದ್ದದ ಪ್ರಮುಖ ರಸ್ತೆಗಳನ್ನು 4,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಪ್ರಸಕ್ತ ಸಾಲಿನಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (SHDP) ಹಂತ-5ನ್ನು ಪ್ರಾರಂಭಿಸಲಾಗುವುದು.

297. ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ (Elevated Corridor) ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು.

298. ಬೆಂಗಳೂರು-ಮಂಡ್ಯ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದಲ್ಲಿರುವ ಜಂಕ್ಷನ್ನಲ್ಲಿ ವಾಹನ ಸಂಚಾರ ದಟ್ಟಣೆಯನ್ನು ನೀಗಿಸಲು ಎನ್.ಹೆಚ್.ಎ.ಐ ಸಹಯೋಗದೊಂದಿಗೆ ಮೇಲುಸೇತುವೆ ನಿರ್ಮಾಣ ಮಾಡಲಾಗುವುದು.

299. ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲು ಹಾಗೂ ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು.

300. ಸಮರ್ಪಿತ ಆರ್ಥಿಕ ಕಾರಿಡಾರ್ಗಳು ಆರ್ಥಿಕ ಅಭಿವೃದ್ಧಿಗೆ ಪೂರಕ ಮೂಲಸೌಕರ್ಯ ಜಾಲವನ್ನು ಒದಗಿಸುತ್ತವೆ. ರಾಜ್ಯದ ಮೂಲಕ ಹಾದು ಹೋಗುವ ಮುಂಬೈ-ಚೆನ್ನೈ ಕಾರಿಡಾರ್ನಲ್ಲಿ ನಾವು ಹಲವಾರು ಕೈಗಾರಿಕಾ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡಿದ್ದೇವೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಎರಡು ಆರ್ಥಿಕ ಕಾರಿಡಾರ್ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಒಂದು ಕಾರಿಡಾರ್ ಮಂಗಳೂರು ಬಂದರಿನಿಂದ ಬೆಂಗಳೂರು ವರೆಗೆ ಅಭಿವೃದ್ಧಿಪಡಿಸಲಾಗುವುದು. ಇದರಿಂದ ಬಂದರು ಸಂಪರ್ಕ ಸುಲಭವಾಗುವುದಲ್ಲದೆ, ಯುರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸರಕು ಸಾಗಾಣಿಕೆ ಅವಧಿ ಗಣನೀಯವಾಗಿ ಕಡಿಮೆಯಾಗಲಿದೆ. ಇನ್ನೊಂದು ಕಾರಿಡಾರ್ ಅನ್ನು ಬೀದರ್ ಹಾಗೂ ಬೆಂಗಳೂರು ನಡುವೆ ಅಭಿವೃದ್ಧಿಪಡಿಸುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಚುರುಕುಗೊಳಿಸಲಾಗುವುದು.

*ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ*

301. ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಮೂಲಸೌಕರ್ಯ ಯೋಜನೆಗಳ ಪ್ರಗತಿ ಮೇಲ್ವಿಚಾರಣೆಗೆ ಹಾಗೂ ಎದುರಾಗುವ ಅಂತರ್ ಇಲಾಖಾ ಮತ್ತು ಹಣಕಾಸಿನ ತೊಡಕುಗಳನ್ನು ಬಗೆಹರಿಸಲು ಮುಖ್ಯಮಂತ್ರಿಗಳ ಕಛೇರಿಯಲ್ಲಿ ಪ್ರತ್ಯೇಕ ಘಟಕವನ್ನು ಸ್ಥಾಪಿಸಲಾಗುವುದು.

302. ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು. ಬಂದರು, ರೈಲು ಮತ್ತು ವಿಮಾನ ಸಂಪರ್ಕವನ್ನು ಒದಗಿಸುವ ಮೂಲಕ ಕೆಲವು ವರ್ಷಗಳಲ್ಲಿ ಅಂದಾಜು 20,000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ ಹೊಂದಿದ್ದೇವೆ.

303. ರಾಜ್ಯದಲ್ಲಿ ಜಲಸಾರಿಗೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಖಾಸಗಿ ಹೂಡಿಕೆಗಳನ್ನು ಆಕರ್ಷಿಸಲು, ಕರ್ನಾಟಕ ಜಲಸಾರಿಗೆ ಅಭಿವೃದ್ಧಿ ನೀತಿಯನ್ನು ಹಾಗೂ ಒಳನಾಡು ಜಲಸಾರಿಗೆ ನಿಯಮಗಳನ್ನು ರೂಪಿಸಲಾಗುವುದು.

304. ಸಾಗರಮಾಲಾ ಯೋಜನೆಯಡಿ ಕಡಲ ತೀರದ ವ್ಯಾಪಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ ಅಂದಾಜು 1,017 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 26 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇವುಗಳ ಪೈಕಿ ರಾಜ್ಯದ ಪಾಲು 530 ಕೋಟಿ ರೂ.ಗಳಾಗಿದೆ. ಮುಂದುವರೆದು, ಇನ್ನೂ 1,145 ಕೋಟಿ ರೂ. ಮೊತ್ತದ 12 ಕಾಮಗಾರಿಗಳ ವಿಸ್ತೃತ ಯೋಜನಾ ವರದಿಗಳನ್ನು ಕೇಂದ್ರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.

305. ಕರಾವಳಿ ತೀರ ಪ್ರದೇಶ ಹಾಗೂ ಬಂದರುಗಳ ಅಭಿವೃದ್ಧಿಯು ರಾಜ್ಯದ ಜಲಸಾರಿಗೆ ವಹಿವಾಟು ಹೆಚ್ಚಿಸಿ, ಉದ್ಯೋಗ ಸೃಜನೆಯ ಜೊತೆಗೆ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಈ ನಿಟ್ಟಿನಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರವು ಬದ್ಧವಾಗಿದೆ;

• ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು ೪,೨೦೦ ಕೋಟಿ ರೂ. ಅಂದಾಜು ಯೋಜನಾ ವೆಚ್ಚದ ಹೊಸ ಆಳಸಮುದ್ರ ಸರ್ವಋತು ಬಂದರನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

• ಉತ್ತರ ಕನ್ನಡ ಜಿಲ್ಲೆಯ ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಅಂದಾಜು ೩೦೪೮ ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ಧಿಗೆ ಅಂತರಾಷ್ಟ್ರೀಯ ಟೆಂಡರ್ ಅನ್ನು ಕರೆಯಲಾಗಿದೆ.

• ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಾಲ್ಕು ಬರ್ತ್ಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.

• ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹೂಳೆತ್ತುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಗೊಳ್ಳಲಾಗುತ್ತಿದೆ.

• ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುತ್ತಿದೆ.

• ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುವುದು.

• ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಯನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.

306. ಹಳೆ ಮಂಗಳೂರು ಮತ್ತು ಹಂಗಾರಕಟ್ಟೆ ಬಂದರುಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಆಧುನಿಕ ಹಡಗು ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಈ ವಲಯದಲ್ಲಿ ಇನ್ನೂ ಹೆಚ್ಚು ಹೂಡಿಕೆಯನ್ನು ಆಕರ್ಷಿಸಲು ಆದ್ಯತೆ ನೀಡಲಾಗುವುದು.

307. ಮೂಲಸೌಕರ್ಯ ಅಭಿವೃದ್ದಿ ಇಲಾಖೆಯಡಿಯಲ್ಲಿ ಕಾರ್ಯಸಾಧ್ಯತಾ ವರದಿಗಳ ತಯಾರಿಕೆಗಾಗಿ Karnataka Infrastructure Project Development Fund ಅನ್ನು (KIPDF) ಸ್ಥಾಪಿಸಲಾಗಿದ್ದು, ಇದನ್ನು ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಲಾಗುವುದು ಮತ್ತು ಈ ಕೆಳಕಂಡ ಯೋಜನೆಗಳ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲು ನುರಿತ ಸಂಸ್ಥೆಗಳನ್ನು (Transaction Advisor) ನೇಮಿಸಿಕೊಳ್ಳಲಾಗುವುದು.

• ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರನ್ನು (ICTP) ಅಭಿವೃದ್ಧಿಪಡಿಸಲು ಐ.ಐ.ಟಿ. ಮದ್ರಾಸ್ ಸಹಯೋಗದೊಂದಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.

• ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಅನ್ನು ತಯಾರಿಸಲಾಗುವುದು.

• ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.

308. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ದೃಷ್ಟಿಯಿಂದ 1600 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ;

• ಮೈಸೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಸ್ವಾಧೀನಕ್ಕೆ 126 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಹಾಗೂ ಪ್ರಸಕ್ತ ಸಾಲಿನಲ್ಲಿ ಬಾಕಿ 43 ಕೋಟಿ ರೂ. ಬಿಡುಗಡೆಗೊಳಿಸಿ, ಕಾಮಗಾರಿ ಪ್ರಾರಂಭಕ್ಕೆ ಕ್ರಮ ವಹಿಸಲಾಗುವುದು.

• ವಿಜಯಪುರದಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು, ಶೀಘ್ರವೇ ಕಾರ್ಯಾಚರಣೆ ಪ್ರಾರಂಭವಾಗಲಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಗೆ 94 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

• ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 2023-24ನೇ ಸಾಲಿನಲ್ಲಿ 55 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಬಾಕಿ ಇರುವ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.

• 220 ಕೋಟಿ ರೂ. ವೆಚ್ಚದ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು.

• ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯ ತೊಡಕುಗಳನ್ನು ನಿವಾರಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.

309. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ಸಿಗ್ನೇಚರ್ ಬಿಸಿನೆಸ್ ಪಾರ್ಕ್ನಿಂದ ಹಣಕಾಸು, ಉದಯೋನ್ಮುಖ ತಂತ್ರಜ್ಞಾನ ವಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳಿಗೆ ಉತ್ತೇಜನ ದೊರೆಯಲಿದೆ. ಒಟ್ಟು 817 ಕೋಟಿ ರೂ. ಯೋಜನಾ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಮುಂದಿನ ದಿನಗಳಲ್ಲಿ 5,000 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ನಿರೀಕ್ಷೆ ಇದೆ.

310. ರಾಜ್ಯದಲ್ಲಿ ರೈಲ್ವೆ ಇಲಾಖೆಯೊಂದಿಗೆ ವೆಚ್ಚ ಹಂಚಿಕೆ ಆಧಾರದಲ್ಲಿ 12,147 ಕೋಟಿ ರೂ.ಗಳ 9 ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ.

ಈ ಯೋಜನೆಯ ಕಾಮಗಾರಿಗಳು ಹಾಗೂ ಭೂಸ್ವಾಧೀನಕ್ಕಾಗಿ 9,915 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಭರಿಸಲಿದೆ. 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ರೈಲ್ವೆ ಯೋಜನೆಗಳಿಗಾಗಿ ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಪಾಲನ್ನು ಕ್ಷಿಪ್ರಗತಿಯಲ್ಲಿ ಪಡೆದು ಆದ್ಯತೆಯನುಸಾರ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.

311. ರಾಜ್ಯದ ಮೂಲಸೌಕರ್ಯ ಯೋಜನೆಗಳನ್ನು ಖಾಸಗಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ಪಿ.ಪಿ.ಪಿ. ನೀತಿ-2018ರ ಮಧ್ಯಂತರ ಪರಿಷ್ಕರಣೆಯನ್ನು ಮಾಡಲಾಗುವುದು.

312. ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಎಲ್ಲಾ ಪಿ.ಪಿ.ಪಿ. ಮಾದರಿಯ ಯೋಜನೆಗಳ ಮಾಹಿತಿ ಸಂಗ್ರಹಣೆ, ಮೇಲ್ವಿಚಾರಣೆ ಮತ್ತು ಪರಿಶೀಲನೆಗಾಗಿ ತಂತ್ರಜ್ಞಾನ ಆಧಾರಿತ ಮಾಹಿತಿ ನಿರ್ವಹಣಾ ವ್ಯವಸ್ಥೆಯನ್ನು (Information Management System) ಅಳವಡಿಸಲಾಗುವುದು.

313. ರಾಜ್ಯದ ತೆರಿಗೆಯೇತರ ರಾಜಸ್ವ ಸಂಗ್ರಹದ ಸಾಮರ್ಥ್ಯದ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಆಸ್ತಿ ನಗದೀಕರಣದ ಅವಕಾಶಗಳನ್ನು ಗುರುತಿಸಲು ಹಾಗೂ ಈ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ವಿಧಾನವನ್ನು ರೂಪಿಸಲು ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು.