ಬೆಂಗಳೂರು: ಪಡಿತರ ಚೀಟಿ ಹೊಂದಿರುವವರು ಅದರಲ್ಲಿ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆ.10ರವರೆಗೆ ಆಹಾರ ಇಲಾಖೆ ಅವಕಾಶ ನೀಡಿದೆ. ಪಡಿತರ ಕಾರ್ಡುದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ಕೊಡಲಾಗಿದೆ. ಅದಕ್ಕಾಗಿ ಅರ್ಜಿದಾರರು ಆಧಾರ್ ಕಾರ್ಡ್ ಪ್ರತಿ, ಹೊಸ ಹೆಸರು ಸೇರ್ಪಡೆಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ಹಾಲಿ ಪಡಿತರ ಚೀಟಿ ದಾಖಲೆ ಇಟ್ಟುಕೊಂಡಿರಬೇಕು. ತಿದ್ದುಪಡಿ ಮಾಡಿಕೊಳ್ಳುವವರು ಹತ್ತಿರವಿರುವ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಆನ್‌ಲೈನ್ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು. ಆಗಸ್ಟ್ 10ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.