ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ (ಜೂ.13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಉಡುಪಿ ಜಿಲ್ಲೆಯಲ್ಲಿ ಜೂ.12 ರಿಂದ 15ರವರೆಗೆ ಭಾರತೀಯ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌’ ಘೋಷಣೆ ಮಾಡಿದೆ. ಜೂ.12 ರಂದು (ಗುರುವಾರ) ರಜೆ ಘೋಷಣೆ ಮಾಡಲಾಗಿತ್ತು. ವಿವಿಧೆಡೆ ಭಾರೀ ಮಳೆ ಸುರಿದಿದ್ದು ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.