ಬೆಳಗಾವಿ: ನಗರದ ವಡಗಾವಿಯಲ್ಲಿ ಜೂ.27 ರಿಂದ ಜೂ. 30 ರವರೆಗೆ ಮಂಗಾಯಿ ದೇವಿ ಜಾತ್ರೆ ನಡೆಯಲಿದೆ. ಜಾತ್ರೆ ಸಂದರ್ಭದಲ್ಲಿ ಪ್ರಾಣಿ, ಪಕ್ಷಿಗಳ ಬಲಿ ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿಯವರ ಮನವಿ ಮೇರೆಗೆ ವಡಗಾವಿಯ ಮಂಗಾಯಿ ದೇವಿ ಜಾತ್ರೆಯಲ್ಲಿ ಪ್ರಾಣಿ, ಪಕ್ಷಿಗಳ ಬಲಿ ನೀಡುವುದನ್ನು ನಿಷೇಧಿಸುವ ಕುರಿತು ಜೂ.27 ರಿಂದ ಜೂ.30 ರವರೆಗೆ ಜರುಗಲಿರುವ ಜಾತ್ರೆ ಸಂದರ್ಭದಲ್ಲಿ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು 1963 ರನ್ವಯ ಮಂಗಾಯಿ ದೇವಿ ದೇವಸ್ಥಾನ ಆವರಣದಲ್ಲಿ ಅಥವಾ ವಡಗಾವಿಯ ವ್ಯಾಪ್ತಿಯಲ್ಲಿ ಭಕ್ತಾದಿಗಳು, ಸಾರ್ವಜನಿಕರು ದೇವರ ಹೆಸರಿನಲ್ಲಿ ಯಾವುದೇ ರೀತಿಯ ಪ್ರಾಣಿ, ಪಕ್ಷಿಗಳ ಬಲಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.