ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲು ಅವರ ಮನವಿಯ ಮೇರೆಗೆ ವಿಸ್ತರಣೆ ಮಾಡಲಾದ ತಿರುವನಂತಪುರ- ಮಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಾ.12 ರಂದು ಬೆಳಗ್ಗೆ 8 ಕ್ಕೆ ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಸೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ಮಂಗಳೂರು – ತಿರುವನಂತಪುರ ನಡುವೆ ಸಂಚರಿಸಲಿದೆ. ಮಂಗಳೂರಿನಿಂದ ಬೆಳಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ.
ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನಗಳು ಈ ರೈಲು ಸಂಚರಿಸಲಿದೆ.