ಮೈಸೂರು:

ಮೈಸೂರಿನ ಸುತ್ತೂರು ಮಹಾಸಂಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ನೀಡಿದ್ದಾರೆ.

ಸುತ್ತೂರು ವೇದಿಕೆಯಲ್ಲಿ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹದ ಉದ್ಘಾಟನೆಯನ್ನು ಅಮಿತ್ ಶಾ ನೆರವೇರಿಸಿದರು. ಅಯೋಧ್ಯೆ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್‌ ಅವರಿಗೆ ಶ್ರೀ ಶಿವರಾತ್ರಿ ಶಿವಯೋಗಿಗಳ ಮೂರ್ತಿ ಉಡುಗೆ ನೀಡುವ ಮೂಲಕ ಅಮಿತ್‌ ಶಾ ಸನ್ಮಾನಿಸಿದರು

ಇದಕ್ಕೂ ಮೊದಲು ಗದ್ದುಗೆ ಪೂಜೆ ನೆರವೇರಿಸಿದ ಅಮಿತ್‌ ಶಾ ಅವರು ವಿಭೂತಿ ಧಾರಣೆ ಮಾಡಿಕೊಂಡಿದ್ದರು. ಇದು ಎಲ್ಲರ ಗಮನ ಸೆಳೆಯಿತು. ಅಮಿತ್ ಶಾ ಅವರಿಗೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶಾಲು ಹೊದಿಸಿ ಸನ್ಮಾನ ಮಾಡಿದರು. ಶ್ರೀಗಂಧದಲ್ಲಿ ನಿರ್ಮಿಸಿದ ಚಾಮುಂಡೇಶ್ವರಿ ವಿಗ್ರಹ ಹಾಗೂ ಅಮಿತ್ ಶಾ ಭಾವಚಿತ್ರವನ್ನು ನೀಡಲಾಯಿತು.