ಬೆಳಗಾವಿ : ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಗೆಲುವು ಪ್ರಾಪ್ತವಾಗಿದೆ.
ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್, ಮಂಡ್ಯದಲ್ಲಿ ಕುಮಾರಸ್ವಾಮಿ ಹಾಗೂ ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಗೆಲುವು ಸಿಕ್ಕಿದೆ. ಜಗದೀಶ್ ಶೆಟ್ಟರ ಹಾಗೂ ಬಸವರಾಜ ಬೊಮ್ಮಾಯಿ ಬಿಜೆಪಿಯಿಂದ ಸ್ಪರ್ಧೆ ನಡೆಸಿದ್ದರೆ ಕುಮಾರಸ್ವಾಮಿ ಅವರು ಬಿಜೆಪಿ ಜತೆಗಿನ ಮೈತ್ರಿಯಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.