ಹೆಬ್ರಿ : ಹೆಬ್ರಿಯ ಪಾಂಡುರಂಗ ರಮಣ್ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ (ಪಿ.ಆರ್.ಒ.) ವಿಜಯಕುಮಾ‌ರ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ.

ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 11 ವರ್ಷಗಳಿಂದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದು ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ವಿದ್ಯಾರ್ಥಿಗಳನ್ನು ಕೊಂಡೊಯ್ದಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆ ಹೆಬ್ರಿ ತಾಲೂಕು ದೈಹಿಕ ಶಿಕ್ಷಣ ವಿಭಾಗದ ಸಂಯೋಜಕರಾಗಿ, ಕ್ರೀಡಾ ಭಾರತಿ ಹೆಬ್ರಿ ತಾಲೂಕು ಘಟಕದ ಕಾರ್ಯದರ್ಶಿಯಾಗಿ, ಹೆಬ್ರಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ನ ಕಾರ್ಯದರ್ಶಿಯಾಗಿ, ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಶಾರೀರಿಕ್ ಪ್ರಮುಖರಾಗಿ ಸೇವೆ ಸಲ್ಲಿಸುತ್ತಿರುವ ಇವರು ಉತ್ತಮ ನಿರೂಪಕರಾಗಿ ಸಂಘಟಕರಾಗಿ ಗುರುತಿಸಿಕೊಂಡಿದ್ದಾರೆ.