
ಬ್ರಹ್ಮಾವರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ, ಬಿಲ್ಲಾಡಿ ಗ್ರಾಮ ಪಂಚಾಯಿತಿ, ವಂಡಾರು ಮದಗ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ 832ನೇ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಪುನಶ್ಚತನಗೊಳಿಸಲಾದ ವಂಡಾರು ಮದಗಕೆರೆ ಹಸ್ತಾಂತರ ಕಾರ್ಯಕ್ರಮ ಭಾನುವಾರ ಬೋರ್ಡಗಲ್ಲು ಮದಗಕೆರೆ ಆವರಣದಲ್ಲಿ ನಡೆಯಿತು.
ಶಾಸಕ ಕಿರಣ್ ಕುಮಾರ್ ಕೊಡ್ಲಿ ನಾಮಫಲಕ ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಕೆರೆ ಹಸ್ತಾಂತರಿಸಿದರು. ವಂಡಾರು ಮದಗಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಉದ್ಯಮಿ ಮಹೇಶ ಶೆಟ್ಟಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬ್ರಹ್ಮಾವರದ ಅಧ್ಯಕ್ಷ ಪ್ರಕಾಶ ಶೆಟ್ಟಿ, ಬಿಲ್ಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಬಾಯಿ, ಉದ್ಯಮಿಗಳಾದ ಡಿ.ಗೋಪಿನಾಥ್ ಕಾಮತ್, ಸಂಪತ್ ಶೆಟ್ಟಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಇದ್ದರು.