ಬೆಂಗಳೂರು : ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮುಖಂಡರು ತಿಳಿಸಿದರು.