This is the title of the web page
This is the title of the web page

Live Stream

June 2023
S M T W T F S
 123
45678910
11121314151617
18192021222324
252627282930  

| Latest Version 9.4.1 |

State News

ಸಿಎಂ ಬೊಮ್ಮಾಯಿಗೆ ಕನ್ನಡ ಧುರೀಣ ಬರೆದ ಮಹತ್ವದ ಪತ್ರದಲ್ಲಿ ಏನಿದೆ ?

Join The Telegram Join The WhatsApp

ಬೆಳಗಾವಿ :

ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿಸೆಂಬರ್ 3 ರಂದು ಬೆಳಗಾವಿಗೆ ಭೆಟ್ಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ

ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ ಹಾಗೂ ದಕ್ಷಿಣ ಸೋಲ್ಲಾಪೂರ ಪ್ರದೇಶಗಳಿಗೆ ಕಳಿಸುವಂತೆ ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣವು ಸರ್ವೋನ್ನತ ನ್ಯಾಯಾಲಯದಲ್ಲಿ ಅಂತಿಮ ವಿಚಾರಣೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಭಾಗದಲ್ಲಿ ಸೌಹಾರ್ದ ವಾತಾವರಣವನ್ನು ಹದಗೆಡಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಹಾರಾಷ್ಟ್ರ ಬೆಂಬಲಿತ ಶಕ್ತಿಗಳು ನಡೆಸುತ್ತಿವೆ. ಇದರ ಭಾಗವಾಗಿ ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಹಾಗೂ ಶಂಭುರಾಜೆ ದೇಸಾಯಿ ಅವರು ಇದೇ ಶನಿವಾರ ಡಿಸೆಂಬರ್ 3 ರಂದು ಬೆಳಗಾವಿಗೆ ಬರಲಿದ್ದು ಇಲ್ಲಿಯ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆಯ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ. ಇಂತಹ ವಾತಾವರಣದಲ್ಲಿ ಸಚಿವದ್ವಯರು ಬೆಳಗಾವಿಗೆ ಆಗಮಿಸುತ್ತಿರುವುದು ಅತ್ಯಂತ ಗಂಭೀರ ವಿಷಯವಾಗಿದೆ.

ಮಹಾರಾಷ್ಟ್ರದ ಅಚ್ಚ ಕನ್ನಡ ಪ್ರದೇಶಗಳಾದ ಜತ್ತ, ಅಕ್ಕಲಕೋಟ, ದಕ್ಷಿಣ ಸೊಲ್ಲಾಪೂರ ಮತ್ತು ಪಂಢರಪುರ ಕನ್ನಡಿಗರು ಅಲ್ಲಿಯ ಸರಕಾರದ ವಿರುದ್ಧ ಕಹಳೆ ಊದಿದ್ದು ಕರ್ನಾಟಕಕ್ಕೆ ಸೇರುವ ತಮ್ಮ ಪ್ರಬಲವಾದ ಇಚ್ಛೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಅವರಿಗೆ ಕರ್ನಾಟಕ ಸರಕಾರ ಎಲ್ಲ ರೀತಿಯ ಬೆಂಬಲ ನೀಡಬೇಕು. ನೈತಿಕ ಸ್ಥೈರ್ಯ ತುಂಬಬೇಕು. ಈ ದಿಸೆಯತ್ತ ತಾವು ಈ ಕೂಡಲೇ ಇಬ್ಬರು ಹಿರಿಯ ಸಚಿವರನ್ನು ಆ ಪ್ರದೇಶಗಳ ಕನ್ನಡಿಗರ ಭೆಟ್ಟಿಗೆ ಹಾಗೂ ಚರ್ಚೆಗಾಗಿ ಕಳಿಸಬೇಕು. ಇಂತಹ ಕ್ರಮವು ಮಾತ್ರ ಮಹಾರಾಷ್ಟ್ರಕ್ಕೆ ತಕ್ಕ ಉತ್ತರವಾದೀತು.

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನ ಕಾಲಕ್ಕೆ, ಕಳೆದ ವರ್ಷದಂತೆ, ಭಾಷಾ ಸೌಹಾರ್ದವನ್ನು ಹದಗೆಡಿಸುವ ಪ್ರಯತ್ನಗಳು ನಡೆಯುತ್ತಲಿವೆ. ಆದ್ದರಿಂದ ತಾವು ಸಾಧ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಳ್ಳಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ಅವರು ಮನವಿ ಮಾಡಿದ್ದಾರೆ.


Join The Telegram Join The WhatsApp
Admin
the authorAdmin

Leave a Reply