ಬೆಳಗಾವಿ :
ಅಥಣಿ ತಾಲೂಕಿನಲ್ಲಿ ಗ್ರಾಮೀಣ ಕೃಷಿ ಸ್ವಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿದ್ದ ಸಚಿವ ಶಿವಾನಂದ ಪಾಟೀಲ ಹೇಳಿಕೆ ಸೋಮವಾರ ತೀವ್ರ ವಿವಾದ ಸೃಷ್ಟಿಸಿದೆ.
ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಸಚಿವರು ಹೇಳಿದ್ದರು.
ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟು ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬಿತ್ತನೆ ಬೀಜ, ಗೊಬ್ಬರವನ್ನೂ ಕೊಟ್ಟಿದ್ದಾರೆ. ಇನ್ನೂ ರೈತರಿಗೆ ಒಂದು ಆಸೆ ಇದೆ… ಪದೇ ಪದೇ ಬರಗಾಲ ಬರಲಿ ಎಂಬುದು. ಕಾರಣ ಸಾಲ ಮನ್ನಾ ಆಗುತ್ತೆ ಎಂದು. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದರು. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜೆಡಿಎಸ್ –ಬಿಜೆಪಿ ನಾಯಕರು ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಚಿವರು ಈ ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ-ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ.