ದಾವಣಗೆರೆ:
ದಾವಣಗೆರೆ ಹೊರವಲಯದ ಪಂಜಾಬಿ ಡಾಬಾ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತಡರಾತ್ರಿ
ಬೊಲೆರೋ ಟೆಂಪೋ ವಾಹನದ ಟಯರ್ ಸ್ಫೋಟಗೊಂಡ ಪರಿಣಾಮ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತರ ಆರು ಜನರಿಗೆ ಗಾಯಗಳಾಗಿವೆ.

ಮೃತರು ಹಾಗೂ ‌ಗಾಯಾಳುಗಳು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಂ‌ ತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿಕಾಯಿ ತೆಗೆದುಕೊಂಡು ತಮ್ಮೂರಿಗೆ ವಾಪಸ್ಸಾಗುವಾಗ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.