ಬೆಂಗಳೂರು: ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸುವ ಕುರಿತು ರಾಜ್ಯ ಸರ್ಕಾರವು ಮತ್ತೊಮ್ಮೆ ಸಮಿತಿಯನ್ನು ಪುನರ್‌ ರಚಿಸಿರುವ ಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘ ವಿರೋಧ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಅವರು, ಸರ್ಕಾರವು ಎನ್‌ಪಿಎಸ್‌ ಯೋಜನೆಯನ್ನು ರದ್ದುಗೊಳಿಸುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳುವ ನಿರೀಕ್ಷೆಯಲ್ಲಿದ್ದ ನೌಕರರಿಗೆ ರಾಜ್ಯ ಸರ್ಕಾರವು ಮೂರನೇ ಬಾರಿಗೆ ಸಮಿತಿಯನ್ನು ರಚಿಸಿ, ವಿಳಂಬಗೊಳಿಸುತ್ತಿರುವ ಕ್ರಮವು ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ ಮೂಡಿಸಿದೆ ಎಂದು ತಿಳಿಸಿದ್ದಾರೆ.