ಬೆಳಗಾವಿ: ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಪತಿಯ ಸಾವಿನಿಂದ ಆಘಾತಕ್ಕೆ ಒಳಗಾಗಿ ಒಂದು ದಿನದ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದಾರೆ.
ದಾದು ಅಣ್ಣಪ್ಪ ನರವಾಡೆ (72) ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಅಂದೇ ಅವರ ಅಂತ್ಯಕ್ರಿಯೆ ನಡೆಯಿತು. ಪತಿಯ ನಿಧನದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ನೀರು ಇಡುವ ಕಾರ್ಯಕ್ರಮ ಪೂರ್ಣಗೊಳಿಸಿದ ಕೆಲವೇ ಕ್ಷಣಗಳಲ್ಲಿ ಪತ್ನಿ ಮಹಾದೇವಿ ನರವಾಡೆ (65) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.