ಇಸ್ಲಾಮಾಬಾದ್ : 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದಲೇ ಪಾಕಿಸ್ತಾನ ಹಿಂದಕ್ಕೆ ಸರಿಯಬಹುದು. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ ಅದರ ಆತಿಥೇಯ ಹಕ್ಕುಗಳನ್ನು ಐಸಿಸಿ ಕಸಿದುಕೊಂಡರೆ ಮುಂದಾಗುವ ಸಮಸ್ಯೆ ಬಗೆಹರಿಯುವ ವರೆಗೆ ಯಾವುದೇ ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಗಳಲ್ಲಿ ಪಾಲ್ಗೊಳ್ಳುವುದರಿಂದ ಪಾಕಿಸ್ತಾನವು ಹಿಂದಕ್ಕೆ ಸರಿಯಬಹುದು ಎಂದು ಡಾನ್‌ ಪತ್ರಿಕೆಯು ‘ಅಧಿಕೃತ ಮೂಲಗಳನ್ನು’ ಉಲ್ಲೇಖಿಸಿ ವರದಿ ಮಾಡಿದೆ.

ಏತನ್ಮಧ್ಯೆ, ಚಾಂಪಿಯನ್ಸ್ ಟ್ರೋಫಿಯ ಆತಿಥ್ಯದ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯು ಐಸಿಸಿಯಿಂದ ಸ್ಪಷ್ಟೀಕರಣವನ್ನು ಕೇಳಲಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಯಾಕೆಂದರೆ ಭಾರತವು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ತಿಳಿಸಲಾಗಿದೆ. ಹಾಗೂ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ನಡೆಸಬೇಕು ಎಂದು ಪ್ರಸ್ತಾಪಿಸಲಾಗಿದೆ.

ಐಸಿಸಿಗೆ ತಿಳಿಸಿದ ನಂತರ ಬಿಸಿಸಿಐ ತಿಳಿಸಿದ ನಂತರ ಭಾರತವು ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂದು ಐಸಿಸಿಯು ಪಿಸಿಬಿಗೆ ತಿಳಿಸಿದೆ. “ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡುವ ಬಗ್ಗೆ ಸದ್ಯಕ್ಕೆ ಯಾವುದೇ ಮಾತುಕತೆ ಇಲ್ಲ” ಎಂದು ಪಿಸಿಬಿ ಮೂಲಗಳು ತಿಳಿಸಿವೆ.
ಕಳೆದ ವರ್ಷ ಏಷ್ಯಾಕಪ್‌ನಲ್ಲಿ ಹೈಬ್ರಿಡ್‌ ಮಾದರಿ ಅನುಸರಿಸಲಾಗಿತ್ತು. ಆಗ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿತ್ತು, ಇತರ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದಿತ್ತು.

“ಇದೀಗ ಪಿಸಿಬಿಯಿಂದ ಸಂಪೂರ್ಣ ಪರಿಸ್ಥಿತಿಯನ್ನು ಅವಲೋಕನ ಮಾಡಲಾಗುತ್ತಿದೆ. ಮುಂದಿನ ಹಂತದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಅಗತ್ಯವಿದ್ದರೆ ಸಮಾಲೋಚನೆ ಮತ್ತು ನಿರ್ದೇಶನಗಳಿಗಾಗಿ ಪಿಸಿಬಿಯು ಪಾಕಿಸ್ತಾನ ಸರ್ಕಾರದೊಂದಿಗೆ ಸಂಪರ್ಕದಲ್ಲಿದೆ” ಎಂದು ಮೂಲಗಳು ತಿಳಿಸಿವೆ.
ಭಾರತಕ್ಕೆ ಸಂಬಂಧಿಸಿದಂತೆ ಸರ್ಕಾರದ ನೀತಿ ಮಾರ್ಗಸೂಚಿಗಳಿಗಾಗಿ ಪಿಸಿಬಿ (PCB) ಕಾಯುತ್ತಿದೆ ಎಂದು ಮೂಲಗಳು ತಿಳಿಸಿವೆ, ಭಾರತವು ಭಾಗವಹಿಸಲು ನಿರಾಕರಿಸಿದ ಬಗ್ಗೆ ಐಸಿಸಿ (ICC)ಯಿಂದ ಸ್ಪಷ್ಟೀಕರಣ ಪಡೆಯಲು ಉಲ್ಲೇಖಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.