ದೆಹಲಿ: ಇಂದಿನಿಂದ ಸಂಸತ್ತಿನ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 20ರ ವರೆಗೂ ಅಧಿವೇಶನ ಮುಂದುವರಿಯಲಿದೆ. ಒಂದು ದೇಶ ಒಂದು ಚುನಾವಣೆ ಮಸೂದೆ, ವಕ್ಫ್ ಮಸೂದೆ ಸೇರಿದಂತೆ ಸುಮಾರು ಹದಿನಾರು ಮಸೂದೆಗಳನ್ನು ಸರ್ಕಾರ ಮಂಡಿಸುವ ಸಾಧ್ಯತೆ ಇದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಹುಮ್ಮಸ್ಸಿನಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಪ್ರತಿಪಕ್ಷಗಳ ವಾಕ್ಸಮರವನ್ನು ಯಾವ ರೀತಿಯಲ್ಲಿ ಎದುರಿಸಲಿದೆ ಎಂದು ಕಾದು ನೋಡಬೇಕಾಗಿದೆ.