ಬೆಂಗಳೂರು : ಕೇಂದ್ರೀಯ ಚುನಾವಣಾ ಸಮಿತಿಗೆ ಹಾಲಿ ಸಂಸದರ ಹೆಸರು ಒಳಗೊಂಡಂತೆ 2-3 ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಕಳುಹಿಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

28 ಲೋಕಸಭಾ ಕ್ಷೇತ್ರಗಳಿಗೂ ಹೆಸರು ಶಿಫಾರಸು ಮಾಡಲು ನಿರ್ಧರಿಸಲಾಗಿದೆ. ಮೈತ್ರಿ ಪಕ್ಷ ಜೆಡಿಎಸ್ ಗೆ ಎಷ್ಟು ಸ್ಥಾನ ಬಿಟ್ಟು ಕೊಡಬೇಕು ಎಂದು ಹೈಕಮಾಂಡ್ ತೀರ್ಮಾನಿಸಲಿದೆ. ರಾಜ್ಯದ 28 ಕ್ಷೇತ್ರ ಗೆಲ್ಲುವ ಮೂಲಕ ಹೊಸ ದಾಖಲೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಪಕ್ಷದ ಟಿಕೆಟ್ ಆಕಾಂಕ್ಷಿಗಳ ಹೆಸರು ಕಳಿಸುವುದು ನಮ್ಮ ಕರ್ತವ್ಯವಾಗಿದೆ. ಹಾಲಿ ಸಂಸದರ ಹೆಸರುಗಳನ್ನು ಒಳಗೊಂಡಂತೆ ಪಟ್ಟಿಯನ್ನು ಕಳಿಸಲಾಗುತ್ತದೆ ಎಂದರು.