
ಮುದ್ರಾಡಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುದ್ರಾಡಿಯಲ್ಲಿ ದಿನಾಂಕ 05/06/2025 ಗುರುವಾರ ವಿಶ್ವ ಪರಿಸರ ದಿನಾಚರಣೆ ನಡೆಯಿತು.
ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಸನ್ನ ಕುಮಾರ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಸುರೇಖಾ ಶೆಟ್ಟಿ, SDMC ಮಾಜಿ ಅಧ್ಯಕ್ಷರಾದ ಶುಭದರ ಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಶ್ರೀನಿವಾಸ ಭಂಡಾರಿ ಸ್ವಾಗತಿಸಿ ವಂದಿಸಿದರು.
ಪರಿಸರದ ಕಾಳಜಿಯನ್ನು ಈಗಿನಿಂದಲೇ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಇದರಿಂದ ವಾತಾವರಣ ಶುದ್ಧ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ.
ವಿದ್ಯಾರ್ಥಿಗಳು ಪ್ರತಿ ವರ್ಷ ನಿಮ್ಮ ಮನೆಯ ಹತ್ತಿರ ಅಥವಾ ಸುತ್ತಮುತ್ತ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಿ ಕಾಳಜಿಯಿಂದ ಪೋಷಣೆ ಮಾಡಬೇಕು. ಇದರಿಂದ ಮುಂದಿನ ದಿನಗಳಲ್ಲಿ ಪರಿಶುದ್ದ ಗಾಳಿ ಸಿಗುತ್ತದೆ ಎಂದು ಮುಖ್ಯ ಶಿಕ್ಷಕ ಶ್ರೀನಿವಾಸ ಭಂಡಾರಿ ಹೇಳಿದರು.