ಮಂಗಳೂರು:
ಭಾರತೀಯ ಅಂಚೆ ಇಲಾಖೆ ಮತ್ತು ಎಂಆರ್‌ಪಿಎಲ್ ಸಹಭಾಗಿತ್ವದಲ್ಲಿ ಯಕ್ಷಗಾನ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ಭಾನುವಾರ ನಡೆಯಲಿದೆ.
ಭಾರತೀಯ ಅಂಚೆ ಇಲಾಖೆ ಯಕ್ಷಗಾನದ ಅಂಚೆಚೀಟಿಯನ್ನು ಹೊರತಂದಿದ್ದು ಬಿಡುಗಡೆ ಸಮಾರಂಭ ಫೆ. 25 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ನಗರದ ಎಂಆರ್‌ಪಿಎಲ್ ಸಹಯೋಗದಲ್ಲಿ ಅಂಚೆಚೀಟಿ ಸಿದ್ಧಗೊಳಿಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಅಂಚೆ ಇಲಾಖೆ ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕುಮಾರ್ ಅಂಚೆಚೀಟಿ ಬಿಡುಗಡೆ ಮಾಡುವರು ಎಂದು ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯಕರ್ತ ಸರಪಾಡಿ ಅಶೋಕ ಶೆಟ್ಟಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.