ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮಾರ್ಚ್‌ 31ರಿಂದ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್‌ 2ರಂದು ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಏಪ್ರಿಲ್‌ 1ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಏಪ್ರಿಲ್‌ 2ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್(Yellow Alert)​ ಘೋಷಿಸಲಾಗಿದೆ.

ಏಪ್ರಿಲ್‌ 3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದೆ. ಏಪ್ರಿಲ್‌ 4 ಮತ್ತು ಏಪ್ರಿಲ್‌ 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.