Join The Telegram | Join The WhatsApp |
ಇಟಗಿ :
ಡಾ.ಅಂಜಲಿ ತಾಯಿ ಪ್ರತಿಷ್ಠಾನದ ವತಿಯಿಂದ ಇಟಗಿ ಗ್ರಾಮದಲ್ಲಿ ಗುರುವಾರ ಸಂಜೆ ಹಳದಿ ಕುಂಕುಮ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್, ತಾನು ಶಾಸಕಿಯಾದ ನಂತರ ಖಾನಾಪುರವನ್ನು ಅಭಿವೃದ್ಧಿ ಪಥದತ್ತ ಮುನ್ನೆಡೆಸಿದ್ದೇನೆ. ಇಂದು ಖಾನಾಪುರ ತಾಲೂಕು ಎನ್ನುವುದು ಇದೆ ಎನ್ನುವುದು ಎಲ್ಲರಿಗೂ ಅರಿವಾಗಿದೆ. ಅಷ್ಟೊಂದು ಪ್ರಮಾಣದಲ್ಲಿ ತಾಲೂಕಿನ ಅಭಿವೃದ್ಧಿಗೆ ನಾನು ಶ್ರಮಿಸಿದ್ದೇನೆ. ತಾಲೂಕಿನ ಅರಣ್ಯ ಪ್ರದೇಶಗಳ ಸಮಸ್ಯೆಗಳನ್ನು ಬಿಜೆಪಿ ಸರಕಾರದ ಮುಂದಿಟ್ಟು ಪರಿಹರಿಸಲು ಶ್ರಮಿಸಿದ್ದೇನೆ ಎಂದು ಹೇಳಿದರು.
ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇನ್ನು ಹಲವು ಕಾಮಗಾರಿಗಳು ನಡೆಯಬೇಕಾಗಿದೆ. ಕಾಲಮಿತಿಯಲ್ಲಿ ಅವುಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.
ಬಿಜೆಪಿ ಸರಕಾರ ತಾಲೂಕಿಗೆ ಅಗತ್ಯವಾಗಿರುವ ಅನುದಾನ ನೀಡುವಲ್ಲಿ ತಾರತಮ್ಯ ಎಸಗುತ್ತಿದೆ. ಖಾನಾಪುರ ತಾಲೂಕಿನ ಪೂರ್ವ ಭಾಗದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ. ಸ್ವಲ್ಪ ದಿನ ಕಾಯಿರಿ. ಮುಂದೆ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಅವರು ಹೇಳಿದರು.
ಎಸ್ಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಮಾದರ ಮಾತನಾಡಿ, ಕಾಂಗ್ರೆಸ್ ಪಕ್ಷ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಅವರು ರಚಿಸಿರುವ ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ನಮ್ಮ ನಾಯಕಿ ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಅವರ ಮುಂದಾಳತ್ವದಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿ ಸಾಧ್ಯವಾಗಿದೆ. ಇಡೀ ತಾಲೂಕನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಅವರು ಕೊಂಡೊಯ್ಯುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ವಿಜಯ್ ಸಾಣಿಕೊಪ್ಪ ಮಾತನಾಡಿ, ಶಾಸಕಿ ಅಂಜಲಿ ನಿಂಬಾಳ್ಕರ್ ತಾಲೂಕಿನ ಅಭಿವೃದ್ಧಿ ಗುರಿಯಿಂದ ಸ್ಪಷ್ಟ ಯೋಜನೆಗಳ ಮೂಲಕ ಕೆಲಸ ಮಾಡುತ್ತಿರುವುದು ಅತ್ಯಂತ ಅಭಿನಂದನೀಯ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾದೇವ ಕೋಳಿ, ವಿಜಯ ಸಾಣಿಕೊಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ದಂಡಗಲ್, ಮಲ್ಲಿಕಾರ್ಜುನ ತುರಮುರಿ, ಬಸವರಾಜ ತುರಮುರಿ, ಬಸವರಾಜ ಪುಂಡೆ, ಇಕ್ಬಾಲ್ ನದಾಫ್, ಇಟಗಿ ಗ್ರಾಮ ಪಂಚಾಯತ್ ಅಧ್ಯಕ್ಷ ದೇಮಣ್ಣ ಗಗನಾಯಕ, ಫಕೀರಪ್ಪ ಬೈರಜಿ, ಇಟಗಿ ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ ತಾಕಾಯಿತ್, ಮಹಾವೀರ ಹುಲಿಕವಿ, ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅನ್ವರ ಬಾಗವಾನ್, ಗಂಗಾಧರ ಅಂಬರಗಟ್ಟಿ, ರಾಜು ತಿಪ್ಪನ್ನವರ, ಮಾಜಿ ಬ್ಲಾಕ್ ಅಧ್ಯಕ್ಷ ದೇಮಣ್ಣ ಬಸರಿಕಟ್ಟಿ, ಭರತೇಶ ತೊರೋಜಿ, ವಿವೇಕ ತಡಕೋಡ ಸೇರಿದಂತೆ 3,000ಕ್ಕೂ ಅಧಿಕ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Join The Telegram | Join The WhatsApp |