ಕೋಲ್ಕತ್ತ: ಲೋಕಸಭೆ ಚುನಾವಣೆಗೆ ಭಾರತ ತಂಡದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ತೃಣಮೂಲ ಕಾಂಗ್ರೆಸ್ (ಟಿಎಂಸಿ)ನಿಂದ ಕಣಕ್ಕೆ ಇಳಿದಿದ್ದಾರೆ.

ಯೂಸುಫ್ ಪಠಾಣ್ ಅವರನ್ನು ಬೆಹ್ರಾಂಪುರ ಕ್ಷೇತ್ರದಿಂದ ಟಿಎಂಸಿ ಕಣಕ್ಕಿಳಿಸಿದೆ. ಈ ಕ್ಷೇತ್ರವನ್ನು ಈಗ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪ್ರತಿನಿಧಿಸುತ್ತಿದ್ದಾರೆ.

ಯೂಸುಫ್ ಪಠಾಣ್ ಮೂಲತಃ ವಡೋದರದವರು. ಇವರು 2001ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾಪರ್ಣೆ ಮಾಡಿದರು. ನಂತರ ರಣಜಿ ಹಾಗೂ ಭಾರತ ತಂಡದಲ್ಲಿ ಸ್ಥಾನ ಪಡೆದು ಆಡಿದರು. ಐಪಿಎಲ್‌ನಲ್ಲಿ ಕೋಲ್ಕತ್ತ ನೈಟ್‌ರೈಡರ್ಸ್‌(ಕೆಕೆಆರ್) ತಂಡವನ್ನು ಪ್ರತಿನಿಧಿಸಿ ಬಂಗಾಳದಲ್ಲಿ ಜನಪ್ರಿಯತೆ ಪಡೆದರು.

ಯೂಸುಫ್ ಪಠಾಣ್ 2021ರಲ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ ಮಾಡಿದರು.

ಪಶ್ಚಿಮ ಬಂಗಾಳದ 42 ಕ್ಷೇತ್ರಗಳಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ಅಭ್ಯರ್ಥಿಗಳನ್ನು ಭಾನುವಾರ ಘೋಷಣೆ ಮಾಡಿತು.